ಬೆಂಗಳೂರು: RSS ಮೇಲೆ ನಿರ್ಬಂಧ ವಿಧಿಸುವ ರಾಜ್ಯ ಕಾಂಗ್ರೆಸ್ ಸರ್ಕಾರಕ್ಕೆ ಹೈಕೋರ್ಟ್ ಆಘಾತ ನೀಡಿದೆ.
ಸಾರ್ವಜನಿಕ ಸ್ಥಳಗಳಲ್ಲಿ ಮತ್ತು ಸರ್ಕಾರಿ ಜಾಗಗಳಲ್ಲಿ ಚಟುವಟಿಕೆಗಳನ್ನು ನಿರ್ಬಂಧಿಸಿ ಸರ್ಕಾರ ಹೊರಡಿಸಿದ್ದ ಆದೇಶ ಆದೇಶಕ್ಕೆ ಹೈಕೋರ್ಟ್ ತಡೆ ನೀಡಿದೆ.ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಅವರಿದ್ದ ಪೀಠ ಮಂಗಳವಾರ ಮಧ್ಯಂತರ ತಡೆಯಾಜ್ಞೆ ನೀಡಿದೆ.
ಸರ್ಕಾರದ ಆದೇಶ ಪ್ರಶ್ನಿಸಿ ಹೈಕೋರ್ಟ್ನ ಧಾರವಾಡ ಪೀಠಕ್ಕೆ ಸಲ್ಲಿಸಲಾಗಿದ್ದ ದಾವೆ ಕುರಿತಂತೆ ವಿಚಾರಣೆ ನಡೆಸಿದ ನ್ಯಾ.ಎಂ. ನಾಗಪ್ರಸನ್ನ ಅವರಿದ್ದ ಪೀಠ ರಾಜ್ಯ ಸರ್ಕಾರ, ಗೃಹ ಇಲಾಖೆಗೆ ನೀಡಿದೆ.
ಅಕ್ಟೋಬರ್18 ರಂದು ರಾಜ್ಯ ಸರ್ಕಾರ ಹೊರಡಿಸಿದ್ದ ಆದೇಶಕ್ಕೆ ವ್ಯಾಪಕ ವಿರೋಧ ವ್ಯಕ್ತವಾಗಿತ್ತು. ರಸ್ತೆ, ಪಾರ್ಕ್, ಮೈದಾನ, ಕೆರೆ ಇತ್ಯಾದಿಗಳ ಪ್ರವೇಶಕ್ಕೆ ನಿರ್ಬಂಧ ವಿಧಿಸಿ ಹೊರಡಿಸಲಾಗಿದ್ದ ಆದೇಶವೂ RSS ನ ಶತಾಬ್ದಿ ಪಥಸಂಚಲನಕ್ಕೂ ಅಡ್ಡಿಯಾಗಿತ್ತು. ಈ ಆದೇಶ ಮೂಲಕ ಸಂವಿಧಾನದ ಆರ್ಟಿಕಲ್ 19 (1)A, B, ನೀಡಿರುವ ಹಕ್ಕನ್ನು ಸರ್ಕಾರ ಕಿತ್ತುಕೊಂಡಿದೆ ಎಂಬ ಆಕ್ರೋಶವೂ ವ್ಯಕ್ತವಾಗಿತ್ತು.




