ಶ್ರೀಕಾಕುಳಂ ಜಿಲ್ಲೆಯ ಶ್ರೀ ವೆಂಕಟೇಶ್ವರ ಸ್ವಾಮಿ ದೇವಸ್ಥಾನದಲ್ಲಿ ಭೀಕರ ಕಾಲ್ತುಳಿತ; 10ಕ್ಕೂ ಹೆಚ್ಚು ಮಂದಿ ಸಾವು

ಜನಸಂದಣಿ ಸೇರುವ ಸ್ಥಳಗಳಲ್ಲಿ ಕಾಲ್ತುಳಿತ ಘಟನೆಗಳು ಮರುಕಳಿಸುತ್ತಲೇ ಇದ್ದು, ಕಾರ್ತಿಕ ಮಾಸದ ಏಕಾದಶಿ ಸಂದರ್ಭದ ಕೈಂಕರ್ಯ 10ಕ್ಕೂ ಹೆಚ್ಚು ಜನರ ಸಾವಿಗೆ ಸಾಕ್ಷಿಯಾಯಿತು. . ಪ್ರಾರ್ಥನೆ ಸಲ್ಲಿಸಲು ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಸೇರಿದ್ದ ಸಮಯದಲ್ಲಿ ದುರಂತ ಸಂಭವಿಸಿದೆ. ಶ್ರೀಕಾಕುಳಂ ಜಿಲ್ಲೆಯ ಶ್ರೀ ವೆಂಕಟೇಶ್ವರ ಸ್ವಾಮಿ ದೇವಸ್ಥಾನದಲ್ಲಿ ಶನಿವಾರ ಈ ದುರ್ಘಟನೆ ಸಂಭವಿಸಿದೆ.

ಕರ್ನೂಲ್ ಬಸ್ ದುರಂತದ ಕಹಿ ನೆನಪು ಮಾಸುವ ಮುನ್ನವೇ ಆಂಧ್ರ ಪ್ರದೇಶದಲ್ಲಿ ಮತ್ತೊಂದು ಭೀಕರ ದುರಂತ ಇದಾಗಿದೆ. ಶ್ರೀಕಾಕುಳಂ ಜಿಲ್ಲೆಯ ಕಾಶಿಬುಗ್ಗ ಪಟ್ಟಣದ ಶ್ರೀ ವೆಂಕಟೇಶ್ವರ ಸ್ವಾಮಿ ದೇವಸ್ಥಾನದಲ್ಲಿ ಶನಿವಾರ ಕಾರ್ತಿಕ ಮಾಸದ ಏಕಾದಶಿ ಪ್ರಯುಕ್ತ ಪೂಜೆ ಸಲ್ಲಿಸಲು ಭಾರೀ ಸಂಖ್ಯೆಯಲ್ಲಿ ಭಕ್ತರು ಜಮಾಯಿಸಿದ್ದರು. ದೇವರ ದರ್ಶನಕ್ಕಾಗಿ ದೇವಾಲಯ ದೇವಾಲಯದ ಆವರಣದ ಪ್ರವೇಶದ್ವಾರದ ಬಳಿ ಜನಸಂದಣಿ ನಿಯಂತ್ರಿಸಲು ಪೊಲೀಸರು ಹರಸಾಹಸಪಡುತ್ತಿದ್ದರು. ಆ ವೇಳೆ ನೂಕು ನುಗ್ಗಲು ಉಂಟಾಗಿ ಕಾಲ್ತುಳಿತ ಸಂಭವಿಸಿದೆ.

ಘಟನೆಯಲ್ಲಿ 10ಕ್ಕೂ ಹೆಚ್ಚು ಮಂದಿ ಸಾವನ್ನಪ್ಪಿದ್ದಾರೆ ಎಂದು ಮೂಲಗಳು ತಿಳಿಸಿವೆ. ಘಟನೆಯ ನಂತರ ಪೊಲೀಸರು ಹಾಗೂ ಅಧೀಕಾರಿಗಳು ಸಾರ್ವಜನಿಕರ ಸಹಕಾರದಿಂದ ರಕ್ಷಣಾ ಕಾರ್ಯ ಕೈಗೊಂಡರು ಎಂದು ದೇವಾಲಯದ ಸಿಬ್ಬಂದಿ ತಿಳಿಸಿದ್ದಾರೆ.

Leave a Reply

Your email address will not be published. Required fields are marked *