ದಿ ಬೆಂಗಳೂರು ಸಿಟಿ ಕೋ-ಆಪರೇಟಿವ್ ಬ್ಯಾಂಕ್ ನೇಮಕಾತಿ: ಮರುಪರೀಕ್ಷೆ, ಸೂಕ್ತ ತನಿಖೆಗೆ ರಾಷ್ಟ್ರೀಯ ಅಂಬೇಡ್ಕರ್ ಸೇನೆ ಆಗ್ರಹ

ಬೆಂಗಳೂರು: ಚಾಮರಾಜಪೇಟೆಯಲ್ಲಿನ ದಿ ಬೆಂಗಳೂರು ಸಿಟಿ ಕೋ-ಆಪರೇಟಿವ್ ಬ್ಯಾಂಕ್ ಲಿಮಿಟೆಡ್‌ ನೇಮಕಾತಿ ಪ್ರಕ್ರಿಯೆಗಳಲ್ಲಿ ಭ್ರಷ್ಟಾಚಾರ ನಡೆದಿದೆಂದು ವಿರೋಧಿಸಿ ರಾಷ್ಟ್ರೀಯ ಅಂಬೇಡ್ಕರ್ ಸೇನೆ ವತಿಯಿಂದ ಮಂಗಳವಾರ ಪ್ರತಿಭಟನೆ ನಡೆಯಿತು.

ದಿ ಬೆಂಗಳೂರು ಸಿಟಿ ಕೋ-ಆಪರೇಟಿವ್ ಬ್ಯಾಂಕ್ ಲಿಮಿಟೆಡ್ ಸಿಬ್ಬಂದಿ ನೇಮಕಾತಿಯಲ್ಲಿ ಅಧ್ಯಕ್ಷರು ಮತ್ತು ನಿರ್ದೇಶಕರ ಆಡಳಿತ ಮಂಡಳಿ ಆಯ್ಕೆ ಮಾಡಲು ಹೊರಟಿರುವ ಅಭ್ಯರ್ಥಿಗಳ ನೇಮಕಾತಿ ಪಟ್ಟಿಯನ್ನು ಕೂಡಲೇ ತಡೆಹಿಡಿದು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ (ಕೆಇಎ) ಮೂಲಕ ಮರುಪರೀಕ್ಷೆ ನಡೆಸಬೇಕೆಂದು ಹೋರಾಟಗಾರರು ಆಗ್ರಹಿಸಿದರು. ಈ ಹಿಂದೆ ನೇಮಕಗೊಂಡ 2014, 2017ರ ನೇಮಕಾತಿಯ ಬಗ್ಗೆ ಸೂಕ್ತ ಇಲಾಖಾ ತನಿಖೆ ನಡೆಸುವಂತೆ ಒತ್ತಾಯಿಸಿ, ರಾಷ್ಟ್ರೀಯ ಅಂಬೇಡ್ಕರ್ ಸೇನೆ ರಾಜ್ಯಾಧ್ಯಕ್ಷ ಡಾ. ಅರ್ಜುನ್ ಗೋಪಾಲ್ ನೇತೃತ್ವದ ನಿಯೋಗ ಸಹಕಾರ ಸಂಘಗಳ ನಿಬಂಧಕರಾದ ಆರ್.ಸಿ.ಎಸ್.ಕುಮಾರ್ ರವರಿಗೆ ಮನವಿ ಮಾಡಿತು.

ಟೈಗರ್ ಎಂ ಅರುಣ್, ಎಸ್.ಕೆಂಚಯ್ಯ, ರಾಜ್ಯ ಯುವ ಘಟಕದ ಅಧ್ಯಕ್ಷ ವಿಷ್ಣು ನಾರಾಯಣ್ ಸೇರಿದಂತೆ ಅನೇಕರು ಈ ಹೋರಾಟದಲ್ಲಿ ಭಾಗಿಯಾದರು.

 

Leave a Reply

Your email address will not be published. Required fields are marked *