ಬೆಂಗಳೂರು : ಮತ ಕಳ್ಳತನ ವಿರುದ್ಧ ದೇಶವ್ಯಾಪಿ ಅಭಿಯಾನ ನಡೆಸುತ್ತಿರುವ ಕಾಂಗ್ರೆಸ್ ಪಕ್ಷವನ್ನು ಬೆಂಬಲಿಸಿ ಪಕ್ಷದ ಯುವ ಘಟಕ ಬೆಂಗಳೂರಿನಲ್ಲಿ ಶನಿವಾರ ನಡೆಸಿದ ಪ್ರತಿಭಟನೆ ಗಮನಸೆಳೆಯಿತು.
ಕರ್ನಾಟಕ ಪ್ರದೇಶ ಯುವ ಕಾಂಗ್ರೆಸ್ ಸಮಿತಿ ನಾಯಕರು ಹಾಗೂ ಅನೇಕ ಸಚಿವರು, ಶಾಸಕರು, ಸಂಸದರು ಈ ಪ್ರತಿಭಟನೆಯಲ್ಲಿ ಪಾಲ್ಗೊಂಡರು.
ಕರ್ನಾಟಕ ಪ್ರದೇಶ ಯುವ ಕಾಂಗ್ರೆಸ್ ಸಮಿತಿ (KPYCC), ಅಧ್ಯಕ್ಷ ಮಂಜುನಾಥ್ ಗೌಡ ನೇತೃತ್ವದಲ್ಲಿ ಫ್ರೀಡಂ ಪಾರ್ಕ್ ನಲ್ಲಿ ಭಾರೀ ಸಂಖ್ಯೆಯಲ್ಲಿ ಜಮಾಯಿಸಿದ ಕಾರ್ಯಕರ್ತರು ವೋಟ್ ಚೋರಿ ವಿರುದ್ಧ ರಣಕಹಳೆ ಮೊಳಗಿಸಿದರು.
ಗಂಭೀರ ಚುನಾವಣಾ ಅಕ್ರಮಗಳಿಗೆ ಭಾರತ ಚುನಾವಣಾ ಆಯೋಗ ಮತ್ತು ಕೇಂದ್ರ ಸರ್ಕಾರದಿಂದ ಹೊಣೆಗಾರಿಕೆಯಾಗಿದೆ ಎಂದು ನಾಯಕರು ಆರೋಪಿಸಿದರು.
ಸಂಸದ ಜಿ.ಸಿ. ಚಂದ್ರಶೇಖರ್, ಸಚಿವ ಸಂತೋಷ್ ಲಾಡ್, ಶಾಸಕರಾದ ಸಲೀಂ ಅಹ್ಮದ್, ರಿಜ್ವಾನ್ ಅರ್ಷದ್ ಸೇರಿದಂತೆ ಅನೇಕ ಮುಖಂಡರು ಪ್ರತಿಭಟನೆಯಲ್ಲಿ ಭಾಗಿಯಾದರು.




